ಸಂಜು, ಶ್ರೇಯಸ್, ನಮನ್ ದಿಟ್ಟ ಬ್ಯಾಟಿಂಗ್ ಕಿವೀಸ್ ಭಾರತಕ್ಕೆ ರೋಚಕ ಗೆಲವು


ಕ್ರೈಸ್ಟ್‌ಚರ್ಚ್: ಅ.22- ಆರಂಭಿಕ‌ ಬ್ಯಾಟರ್ ಸಂಜು ಸ್ಯಾಮ್ಸನ್, ನಾಯಕ ಶ್ರೇಯಸ್ ಅಯ್ಯರ್ ಹಾಗೂ ಕೊನೆಯಲ್ಲಿ ನಮನ್ ಧೀರ್ ಸ್ಪೋಟಕ ಬ್ಯಾಟಿಂಗ್ ನೆರವಿನಿಂದ ನ್ಯೂಜಿಲೆಂಡ್ ವಿರುದ್ಧ ಇಂದು ನಡೆದ ಮೊದಲ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ 4 ವಿಕೆಟ್‌ಗಳ ರೋಚಕ ಜಯ ಸಾಧಿಸಿದೆ. ಐದು ಪಂದ್ಯಗಳ ಟಿ20 ಸರಣಿಯಲ್ಲಿ ಭಾರತ 1-0 ಮುನ್ನಡೆ ಕಾಯ್ದುಕೊಂಡಿದೆ.

ಹೇಗ್ಲೆ ಓವಲ್ ಮೈದಾನದಲ್ಲಿ ಗೆಲ್ಲಲು 226 ರನ್‌ಗಳ ಕಠಿಣ ಗುರಿ ಬೆನ್ನತ್ತಿದ ಭಾರತಕ್ಕೆ ಆರಂಭಿಕರಾದ ಸಂಜು ಸ್ಯಾಮ್ಸನ್ ಹಾಗೂ ಅಭಿಷೇಕ್ ಶರ್ಮಾ ಬಿರುಸಿನಬ ಆರಂಭ ಒದಗಿಸಿಕೊಟ್ಟರು.

ಭಾರತ 3.3 ಓವರ್‌ನಲ್ಲೇ ಅರ್ಧಶತಕದ ಗಡಿ ದಾಟಿತು. ಪವರ್‌ಪ್ಲೇನಲ್ಲೇ ಮೈಚಳಿ ಬಿಟ್ಟು ಬ್ಯಾಟ್ ಬೀಸಿದ ಈ ಜೋಡಿ 5.5 ಓವರ್‌ನಲ್ಲಿ 93 ರನ್‌ಗಳ ಜತೆಯಾಟವಾಡುವ ಮೂಲಕ ತಂಡಕ್ಕೆ ಭದ್ರಬುನಾದಿ ಹಾಕಿ ಕೊಟ್ಟಿತು.

ಅಭಿಷೇಕ್ ಶರ್ಮಾ 12 ಎಸೆತಗಳಲ್ಲಿ 2 ಬೌಂಡರಿ ಹಾಗೂ 3 ಸಿಕ್ಸರ್ ಸಹಿತ 29 ರನ್ ಸಿಡಿಸಿ ಬ್ರೇಸ್‌ವೆಲ್‌ಗೆ ವಿಕೆಟ್ ಒಪ್ಪಿಸಿದರು. ಮತ್ತೊಂದೆಡೆ ತುದಿಯಲ್ಲಿ ಮಿಂಚಿನ ಬ್ಯಾಟಿಂಗ್ ನಡೆಸಿದ ಸಂಜು ಸ್ಯಾಮ್ಸನ್ ಕೇವಲ 33 ಎಸೆತಗಳಲ್ಲಿ 8 ಬೌಂಡರಿ ಹಾಗೂ 4 ಸಿಕ್ಸರ್ ಸಹಿತ ಭರ್ಜರಿ 67 ರನ್ ಸಿಡಿಸಿ ನಿರ್ಗಮಿಸಿದರು.

ಸುಲಭಚಾಗಿ ಜಯಸಾಧಿಸಲಿದೆ ಎಂಬ ನಿರೀಕ್ಷೆಯಲ್ಲಿದ್ಸ ಅಭಿಮಾನಿಗಳಿಗೆ ಸಂಜು ನಿರ್ಗಮನದ ಬಳಿಕ 7 ರನ್ ಅಂತರದಲ್ಲಿ ಮೂರು ವಿಕೆಟ್ ಕಳಕೊಂಡಿದ್ದರಿಂಸ ಸಹಜವಾಗಿ ಭಾರತ ಒತ್ತಡಕ್ಕೆ ಸಿಲುಕಿತು.

ಕ್ರಮಾಂಕಕ್ಕೆ ಬಡ್ತಿಪಡೆದ ತಿಲಕ್ ವರ್ಮಾ 6 ರನ್ ಗಳಿಸಿ ವಿಕೆಟ್ ಒಪ್ಪಿಸಿದರೆ, ಇನ್‌ಫಾರ್ಮ್ ಬ್ಯಾಟರ್ ಇಶಾನ್ ಕಿಶನ್ ಬ್ಯಾಟಿಂಗ್ ಕೇವಲ 1 ರನ್‌ಗೆ ಸೀಮಿತವಾಯಿತು.

ಬಳಿಕ ನಾಯಕ ಶ್ರೇಯಸ್ ಅಯ್ಯರ್ ಹಾಗೂ ನಮನ್ ಧೀರ್ ಜೋಡಿ 43 ರನ್‌ಗಳ ಜತೆಯಾಟವಾಡುವ ಮೂಲಕ ತಂಡಕ್ಕೆ ಆಸರೆಯಾಯಿತು. ಶ್ರೇಯಸ್ ಅಯ್ಯರ್ 28 ಎಸೆತಗಳಲ್ಲಿ 42 ರನ್ ಸಿಡಿಸಿ ವಿಕೆಟ್ ಒಪ್ಪಿಸಿದರೆ, ನಮನ್ ಧೀರ್ ಕೇವಲ 15 ಎಸೆತಗಳಲ್ಲಿ 5 ಬೌಂಡರಿ ಹಾಗೂ ಎರಡು ಸಿಕ್ಸರ್ ಸಹಿತ ಅಜೇಯ 42 ರನ್ ಸಿಡಿಸಿ ಇನ್ನೂ ಎರಡು ಎಸೆತ ಬಾಕಿ ಇರುವಂತೆಯೇ ತಂಡವನ್ನು ಗೆಲುವಿನ ದಡ ಸೇರಿನೀಡಿದರು.

ಟಾಸ್ ಸೋತು ಬ್ಯಾಟ್ ಮಾಡಲಿಳಿದ ಆತಿಥೇಯ ನ್ಯೂಜಿಲೆಂಡ್ 20 ಓವರ್ ಗಳಲ್ಲಿ 4 ವಿಕೆಟ್ ಕಳಕೊಂಡು 225 ರನ್ ಗಳ ಬೃಹತ್ ಮೊತ್ತ ಪೇರಿಸಿತು.
ಎಚ್ಚರಿಕೆಯ ಆರಂಭ ಪಡೆಯಿತು. ಟಿಮ್ ಸೀಫರ್ಟ್ 17 ಎಸೆತಗಳಲ್ಲಿ 24 ರನ್ ಗಳಿಸಿ ಮಯಾಂಕ್ ಯಾದವ್‌ಗೆ ವಿಕೆಟ್ ಒಪ್ಪಿಸಿದರು. ಆದರೆ ಮತ್ತೋರ್ವ ಆರಂಭಿಕ ಬ್ಯಾಟರ್ ಫಿನ್ ಅಲೆನ್ 24ವ ಎಸೆತಗಳಲ್ಲಿ 45 ರನ್ ಚಚ್ಚಿದರು.

ಡೇರಲ್ ಮಿಚೆಲ್ 28 ರನ್ ಗಳಿಸಿ ಅರ್ಶದೀಪ್ ಸಿಂಗ್‌ಗೆ ವಿಕೆಟ್ ಒಪ್ಪಿಸಿದರು. ಒಂದು ಕಡೆ ವಿಕೆಟ್ ಉರುಳುತ್ತಿದ್ದರೂ ಮತ್ತೊಂದು ತುದಿಯಲ್ಲಿ ಸ್ಪೋಟಕ ಬ್ಯಾಟಿಂಗ್ ನಡೆಸಿದ ಗ್ಲೆನ್ ಫಿಲಿಫ್ಸ್ ಕೇವಲ 40 ಎಸೆತಗಳಲ್ಲಿ 8 ಬೌಂಡರಿ ಹಾಗೂ 3 ಸಿಕ್ಸರ್ ಸಹಿತ ಅಜೇಯ 82 ರನ್ ಬಾರಿಸುವ ಮೂಲಕ ತಂಡದ ಮೊತ್ತವನ್ನು 200ರ ಗಡಿ ದಾಟಿಸಿದರು. ಬೆವೊನ್ ಜೇಕೊಬ್ಸ್ 16 ಎಸೆತಗಳಲ್ಲಿ 31 ರನ್ ಸಿಡಿಸಿದರು.

ಭಾರತ ಪರ ಅರ್ಶದೀಪ್ ಸಿಂಗ್, ಮಯಾಂಕ್ ಯಾದವ್ ಹಾಗೂ ಅಕ್ಷರ್ ಪಟೇಲ್ ತಲಾ ಒಂದು ವಿಕೆಟ್ ಹಂಚಿಕೊಂಡರು. ಆದರೆ ಬರೋಬ್ಬರಿ 4 ವರ್ಷಗಳ ಬಳಿಕ ಟೀಂ ಇಂಡಿಯಾ ಪರ ಮೊದಲ ಸಲ ಬೌಲಿಂಗ್ ಮಾಡಿದ ಭುವನೇಶ್ವರ್ ಕುಮಾರ್ ಯಾವುದೇ ವಿಕೆಟ್ ಕಬಳಿಸಲು ಯಶಸ್ವಿಯಾಗಲಿಲ್ಲ.



Source link

Leave a Reply

Your email address will not be published. Required fields are marked *